Home » Dengue epidemic: ಡೆಂಗ್ಯೂ ಸಾಂಕ್ರಾಮಿಕ ರೋಗ: ರಾಜ್ಯ ಸರ್ಕಾರ ಘೋಷಣೆ

Dengue epidemic: ಡೆಂಗ್ಯೂ ಸಾಂಕ್ರಾಮಿಕ ರೋಗ: ರಾಜ್ಯ ಸರ್ಕಾರ ಘೋಷಣೆ

0 comments

Dengue epidemic: ಡೆಂಗ್ಯೂ ಜ್ವರವನ್ನು(Dengue Fever) ಸಾಂಕ್ರಾಮಿಕ ರೋಗ(Pendamic) ಎಂದು ಘೋಷಿಸಿರುವ ರಾಜ್ಯ ಸರ್ಕಾರ(State Govt), ಡೆಂಗ್ಯೂ ನಿಯಂತ್ರಣ ವಿಚಾರವಾಗಿ ಸಾರ್ವಜನಿಕರನ್ನ ಎಚ್ಚರಗೊಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್(Dinesh Gundu Rao) ಡೆಂಗ್ಯೂ ಸಾಂಕ್ರಾಮಿಕ ರೋಗವನ್ನಾಗಿ ಘೋಷಿಸುವುದರ ಜೊತೆಗೆ ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನ ಪಾಲಿಸದವರಿಗೆ ದಂಡ ಕೂಡ ಹಾಕಲಾಗುವುದು ಎಂದರು.

ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸಳ್ಳೆ ಉತ್ಪತ್ತಿ ತಾಣಗಳನ್ನ ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂನಿನ ಅಸ್ತ್ರ ಬಳಸಬಹುದಾಗಿದೆ. ಈ ಹಿಂದೆ ಬೆಂಗಳೂರು ಮತ್ತು ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ ಎಂದರು.

ಡೆಂಗ್ಯೂ ಮಾರ್ಗಸೂಚಿಗಳನ್ನ ಪಾಲಿಸದಿದ್ದರೆ, ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ಹಾಗೂ ನಗರ ಪ್ರದೇಶಗಳಲ್ಲಿ 400 ರೂಪಾಯಿ ದಂಡ ವಿಧಿಸಲಾಗುವುದು. ಅಲ್ಲದೇ ಶಾಲಾ ಕಾಲೇಜು, ಹೊಟೆಲ್, ಲಾಡ್ಜ್, ರೆಸಾರ್ಟ್ ಗಳು ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ಹಾಗೂ ನಗರ ಪ್ರದೇಶಗಳಲ್ಲಿ 1000 ರೂ. ದಂಡ ನಿಗದಿಪಡಿಸಲಾಗಿದ್ದು, ಕಟ್ಟಡ ನಿರ್ಮಾಣ, ಹೊರಾಂಗಣ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ 1000 ರೂ. ಹಾಗೂ ನಗರ ಪ್ರದೇಶಗಳಲ್ಲಿ 2000 ರೂ. ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈಡಿಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಗೆ ಅನುಕೂಲವಾಗುವಂತೆ ನೀರು ಸಂಗ್ರಹಣೆಯಾಗಬಾರದು. ಈ ನಿಟ್ಟಿನಲ್ಲಿ ಎಲ್ಲರು ಎಚ್ಚರಿಕೆ ವಹಿಸುವುದು ಮುಖ್ಯ. ದಂಡ ವಿಧಿಸುವುದಕ್ಕಿಂತ ಜನರು ಡೆಂಗ್ಯೂ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಈ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

You may also like

Leave a Comment