Mangaluru: ಲಂಚ ಪಡೆದ ಪ್ರಕರಣದಲ್ಲಿ ಜೈಲು ಸೇರಿ ನಂತರ ಜಾಮೀನಿನಲ್ಲಿ ಹೊರಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದ ಮಂಗಳೂರಿನ ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕೆಲಸದಿಂದ ವಜಾಗೊಳಿಸಿದೆ.
ಭ್ರಷ್ಟಾಚಾರದ ಆರೋಪದಲ್ಲಿ ಬಂಧಿತರಾಗಿದ್ದರೂ ಅದೇ ಹುದ್ದೆಯಲ್ಲಿ ಮುಂದುವರೆಯುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಯಾವುದೇ ಸರ್ಕಾರಿ ಅಧಿಕಾರಿ ಅರೆಸ್ಟ್ ಆಗಿ ನಲ್ವತ್ತೆಂಟು ಗಂಟೆ ದಾಟಿದರೂ ಅವರನ್ನು ಸ್ಥಾನದಿಂದ ವಜಾಗೊಳಿಸುವ ಕಾನೂನಿದೆ.
ಕೃಷ್ಣವೇಣಿ ವಿಚಾರದಲ್ಲಿ ಇದು ಜಾರಿಗೆ ಬರದಿದ್ದ ಕಾರಣ ಟೀಕೆ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸರ್ಕಾರ ಅವರನ್ನು ಹುದ್ದೆಯಿಂದ ಅಮಾಮತುಗೊಳಿಸಿದೆ. ಜೊತೆಗೆ ಸಂದೀಪ್ ಜಿ.ಯು ಅವರಿಗೆ ಪ್ರಭಾರ ಹೊಣೆ ವಹಿಸಲಾಗಿದೆ.
ಇದನ್ನೂ ಓದಿ:Karnataka: ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ!
