Home News ರಾಸಲೀಲೆ ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್‌ ಅಮಾನತು

ರಾಸಲೀಲೆ ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್‌ ಅಮಾನತು

0
4

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ಉನ್ನತ ಹುದ್ದೆಯಲ್ಲಿದ್ದು, ತಾನು ಕರ್ತವ್ಯ ನಿರ್ವಹಿಸುವ ಕಚೇರಿಯಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪ ಎದುರಿಸುತ್ತಿರುವ ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ ರಾಮಚಂದ್ರ ರಾವ್‌ ಅವರನ್ನು ರಾಜ್ಯ ಸರಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಸೋಷಿಯಲ್‌ ಮೀಡಿಯಾದಲ್ಲಿ 47 ಸೆಕೆಂಡಿನ ವೈರಲ್‌ ವಿಡಿಯೋದಲ್ಲಿ ಡಿಜಿಪಿ ರಾಮಚಂದ್ರ ರಾವ್‌ ಮಹಿಳೆಯರೊಂದಿಗೆ ಮುತ್ತುಕೊಡುವುದು, ತಬ್ಬಿಕೊಳ್ಳುವುದು, ಎದೆಗೆ ಮುತ್ತು ಕೊಡುವುದು ಸೇರಿ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ. ನಾಲ್ವರು ಮಹಿಳೆಯರು ಇದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಒಬ್ಬಳೇ ಮಹಿಳೆ ಬೇರೆ ಬೇರೆ ಉಡುಪಿನಲ್ಲಿ ಇದ್ದಾಳೆ ಎನ್ನಲಾಗಿದೆ.