Home » ಧರ್ಮಸ್ಥಳ | ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಧರ್ಮಸ್ಥಳ | ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

0 comments

ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಜಿಂಕೆ ಚರ್ಮವನ್ನು ಬೆಳಗಾವಿಯಿಂದ ಬಸ್ ಮೂಲಕ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬೆಳಗಾವಿಯ ಹನುಮಂತ(35) ಬಂಧಿತ ಆರೋಪಿ.
ಬಂಧಿತನಿಂದ ಜಿಂಕೆ ಚರ್ಮ ಹಾಗೂ ಒಂದು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ಇದೀಗ ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುತ್ತೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ಶ್ರೀಮತಿ ಜಾನಕಿ ನೇತ್ರತ್ವದಲ್ಲಿ ನಡೆದ ಮಿಂಚಿನ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ವಿಜಯ್ ಸುವರ್ಣ, ಉದಯ್, ಸಂತೋಷ್ ಭಾಗವಹಿಸಿದ್ದರು.

You may also like

Leave a Comment