5
Dharmasthala Case: ಧರ್ಮಸ್ಥಳದಲ್ಲಿ ನೂರಾರು ಹೆಣ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿರುವ ಮನೆಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಿದ್ದಾರೆ.
ಸರ್ಚ್ ವಾರೆಂಟ್ ಪಡೆದು ಎಸ್‌ಐಟಿ ಕಚೇರಿಯಿಂದ ಹೊರಟ ಅಧಿಕಾರಿಗಳ ತಂಡ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರ ಮೋಹನ್ ಶೆಟ್ಟಿ ನಿವಾಸದ ಮೇಲೆ ಇಂದು ಬೆಳಗ್ಗೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
