1
Dharmasthala Case: ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ 06/08/2025 ರಂದು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಅದೇ ದಿನ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬುವವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನ ಮಾಡಿದ್ದಾರೆ ಎಂದು ಜಯಂತ್ ಟಿ ಅವರು ದಿನಾಂಕ 11.08.2025 ರಂದು ಧರ್ಮಸ್ಥಳ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.
ಈ ಕುರಿತು ಪರಿಶೀಲನೆ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
