2
Belthangady: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 31 ರಂದು ಮಾಸ್ಕ್‌ಮ್ಯಾನ್ ಗುರುತು ಮಾಡಿದ 6ನೇ ಪಾಯಿಂಟ್‌ನಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನನ್ವಯ ಯುಡಿಆರ್ ಪ್ರಕರಣ ದಾಖಲು ಮಾಡಿದ್ದಾರೆ.
ತನಿಖೆಯಲ್ಲಿ ಪತ್ತೆಯಾದ ಕಳೇಬರಗಳನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಕಳುಹಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರನೇ ಗುರುತು ಮಾಡಿದ ಜಾಗದಲ್ಲಿ ಪತ್ತೆ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗೆ ಎಸ್‌ಐಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.
