Home » Dharmasthala: ಧರ್ಮಸ್ಥಳ ಪ್ರಕರಣ – ಶವಗಳ ಕುರಿತಾಗಿ RTI ಮೂಲಕ ಸ್ಫೋಟಕ ಮಾಹಿತಿ ಬಹಿರಂಗ !!

Dharmasthala: ಧರ್ಮಸ್ಥಳ ಪ್ರಕರಣ – ಶವಗಳ ಕುರಿತಾಗಿ RTI ಮೂಲಕ ಸ್ಫೋಟಕ ಮಾಹಿತಿ ಬಹಿರಂಗ !!

0 comments

Dharmasthala : ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಮುತ್ತ ಕಾಡಿನಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ (Mass burial case) ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ.

ಹೌದು, ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣದ ತನಿಖೆ ಮುಂದುವರೆಯುತ್ತಿದ್ದಂತೆ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯಿತಿಯವರು 1987ರಿಂದ 2025 ಮಾರ್ಚ್‌ವರೆಗೆ ಒಟ್ಟು 279 ಅನಾಥ ಶವಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಆರ್ ಟಿಐ ಮೂಲಕ ತಿಳಿದು ಬಂದಿದೆ.

1987 ರಿಂದ 2025 ರ ಅವಧಿಯಲ್ಲಿ ಧರ್ಮಸ್ಥಳ ಆಸುಪಾಸಿನಲ್ಲಿ ಶಿಶುಗಳದ್ದೂ ಸೇರಿದಂತೆ ಸುಮಾರು 279 ಶವಗಳನ್ನು ಹೂಳಲಾಗಿದೆ. ಇವುಗಳಲ್ಲಿ ಹೆಚ್ಚಿನವು ಆತ್ಮಹತ್ಯೆ ಪ್ರಕರಣಗಳು ಎಂದು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಪಡೆದ ಮಾಹಿತಿಯಲ್ಲಿ ವರದಿಯಾಗಿದೆ. ಆರ್ ಟಿ ಐ ಅಡಿಯಲ್ಲಿ ಪಡೆದ ವರದಿಯ ಪ್ರಕಾರ, ಧರ್ಮಸ್ಥಳ ಆಸುಪಾಸಿನಲ್ಲಿ ಒಟ್ಟು 279 ಅನಾಥ ಶವಗಳನ್ನು ಹೂಳಲಾಗಿದೆ. ಅದರಲ್ಲಿ 219 ಪುರುಷರ ಶವಗಳು ಮತ್ತು 46 ಮಹಿಳೆಯರ ಶವಗಳಾಗಿವೆ. ಶಿಶುಗಳದ್ದು ಸೇರಿದಂತೆ 14 ಶವಗಳ ಲಿಂಗವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯತಿಯ ಪಿಐಒ ತಿಳಿಸಿದ್ದಾರೆ.

ಅಲ್ಲದೆ ಹೆಚ್ಚಿನ ಸಾವುಗಳು ಆತ್ಮಹತ್ಯೆಯಿಂದಾಗಿ ಸಂಭವಿಸಿವೆ ಎಂಬುದು ಆರ್ಟಿಐ ಅರ್ಜಿ ಅಡಿ ಪಡೆದ ಮಾಹಿತಿಯಿಂದ ತಿಳಿದುಬಂದಿದೆ. ಮೃತದೇಹಗಳು ಕೊಳೆತು ದುರ್ವಾಸನೆ ಬರುತ್ತಿರುವ ಸ್ಥಿತಿಯಲ್ಲಿದ್ದುದರಿಂದ ಅವುಗಳನ್ನು ಅಲ್ಲಲ್ಲೇ ಹೂಳಲಾಗಿತ್ತು ಎಂಬ ಮಾಹಿತಿ ದೊರೆತಿದೆ.

Dog Bite: ನಿಲ್ಲದ ಬೀದಿನಾಯಿಗಳ ಅಟ್ಟಹಾಸ: ಶಾಲೆಯ ಆವರಣದಲ್ಲಿ ಮಗುವನ್ನು ಕಚ್ಚಿದ ನಾಯಿ

You may also like