3
Dharmasthala Case: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಶವ ಹೂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ (Pranab Mohanty) ಬದಲಾವಣೆ ಕುರಿತು ಚರ್ಚೆಗಳು ಜೋರಾಗಿಯೇ ನಡೆಯುತ್ತಿದೆ. ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬದಲಾವಣೆ ಕುರಿತ ಚರ್ಚೆಗಳು ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬದಲಾವಣೆಯ ಸಾಧ್ಯತೆಯನ್ನು ಒತ್ತಿ ಹೇಳಿದ್ದಾರೆ. ಪ್ರಣವ್ ಮೊಹಂತಿ ಕೇಂದ್ರಕ್ಕೆ ತೆರಳಿದರೆ ಎಸ್‌ಐಟಿ ಮುಖ್ಯಸ್ಥರನ್ನು ಬದಲಾಯಿಸಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೇ ತನಿಖೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟ ಪಡಿಸಿದ್ದಾರೆ.
