Dharmasthala: ಧರ್ಮಸ್ಥಳ ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರಗಳನ್ನು ಎಸ್ಐಟಿ ಅಧಿಕಾರಿಗಳು ಎಫ್ಎಸ್ಎಲ್ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದೆ.
ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (SIT) ತನಿಖೆಗೆ ಆದೇಶಿಸಿತ್ತು. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್ಐಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಮಾನವನ 7 ಅಸ್ಥಿಪಂಜರ ಪತ್ತೆಯಾಗಿದ್ದವು.
2025 ರ ಸೆಪ್ಟೆಂಬರ್ 17 ರಂದು 5 ಮತ್ತು ಸೆ.18 ರಂದು 2.. ಹೀಗೆ ಒಟ್ಟು ಏಳು ಅಸ್ಥಿಪಂಜರಗಳನ್ನು ಎಸ್ಐಟಿ ಅಧಿಕಾರಿಗಳು ಪತ್ತೆಹಚ್ಚಿದ್ದರು. ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಿತಿಯಲ್ಲಿ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಸದ್ಯ ಹೆಚ್ಚಿನ ತನಿಖೆಗಾಗಿ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಅಸ್ಥಿಪಂಜರಗಳನ್ನು ರವಾನಿಸಲಾಗಿದೆ.













