Home » ಜನವರಿ 25 ರಂದು ಕಲಬುರಗಿಯಲ್ಲಿ ನಡೆಯಲಿದೆ ವಿವಿಧ ಹುದ್ದೆಗಳ ನೇರ ಸಂದರ್ಶನ! ನೀವೂ ಭಾಗವಹಿಸಿ ಉತ್ತಮ ಉದ್ಯೋಗವನ್ನು ನಿಮ್ಮದಾಗಿಸಿ!

ಜನವರಿ 25 ರಂದು ಕಲಬುರಗಿಯಲ್ಲಿ ನಡೆಯಲಿದೆ ವಿವಿಧ ಹುದ್ದೆಗಳ ನೇರ ಸಂದರ್ಶನ! ನೀವೂ ಭಾಗವಹಿಸಿ ಉತ್ತಮ ಉದ್ಯೋಗವನ್ನು ನಿಮ್ಮದಾಗಿಸಿ!

by ಹೊಸಕನ್ನಡ
0 comments

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 25 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಯಾವೆಲ್ಲಾ ಕಂಪೆನಿಗಳು ಬರಲಿವೆ ಗೊತ್ತಾ! ಇಲ್ಲಿದೆ ನೋಡಿ ಮಾಹಿತಿ.

ಜಿಲ್ಲೆಯ ಸರ್ಕಾರಿ ಐಟಿಐ ಕಾಲೇಜಿನ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜನವರಿ 25 ರಂದು 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಉದ್ಯೋಗಮೇಳದಲ್ಲಿ ನೇರ ಸಂದರ್ಶನದಲ್ಲಿ ಭಾಗವಹಿಹುವ ಕೆಲವು ಕಂಪೆನಿಗಳ ವಿವರ ಇಲ್ಲಿದೆ. ಫ್ಲಿಪ್‍ಕಾರ್ಟ್ ಕಂಪೆನಿಯು ಪಾಲ್ಗೊಳ್ಳುತ್ತಿದ್ದು, ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕ ಮಾಡಿಕೊಳ್ಳಲಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಡ್ಡಾಯವಾಗಿ ಬೈಕ್ ಹಾಗೂ ಡಿ.ಎಲ್. ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಶಿವಾ ಎಂಟರ್ಪ್ರೈಸಸ್ (ಏರ್‍ಟೆಲ್ ಪೇಮೆಂಟ್ ಬ್ಯಾಂಕ್)ದಲ್ಲಿ, ಹುದ್ದೆ: ಸೇಲ್ಸ್ ಎಕ್ಸಿಕ್ಯೂಟಿವ್, ಅರ್ಹತೆ: ಎಸ್.ಎಸ್.ಎಲ್.ಸಿ./ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.

ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.

You may also like

Leave a Comment