Home » Ram Gopal Verma: ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ

Ram Gopal Verma: ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ

0 comments

Ram Gopal Verma: ಟಾಲಿವುಡ್‌ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ವಿರುದ್ಧ 2018 ರಲ್ಲಿ ಮುಂಬೈನಲ್ಲಿ ದಾಖಲಾಗಿದ್ದ ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಕೋರ್ಟ್‌ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳವಾರ (ಜ.21) ತೀರ್ಪು ಪ್ರಕಟವಾಗಿದೆ. ರಾಮ್‌ಗೋಪಾಲ್‌ ವರ್ಮಾ ಕೋರ್ಟ್‌ಗೆ ಹಾಜರಾಗಬೇಕಿತ್ತು ಆದರೆ ವರ್ಮಾ ಕೋರ್ಟ್‌ಗೆ ಹಾಜರಾಗಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದೆ.

ಈ ಪ್ರಕರಣ ಕಳೆದ ಏಳು ವರ್ಷಗಳಿಂದ ನಡೆಯುತ್ತಿತ್ತು. ಆದರೆ ಆರ್‌ಜಿವಿಗೆ ನೋಟಿಸ್‌ ನೀಡಿದರೂ ಕೋರ್ಟ್‌ಗೆ ಹಾಜರಾಗಿಲ್ಲ. ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ಆರ್‌ಜಿವಿ ರೂ.3.72 ಲಕ್ಷ ಪರಿಹಾರ ನೀಡಲು ಕೋರ್ಟ್‌ ಆದೇಶ ನೀಡಿದೆ. ಪಾವತಿಸಲು ವಿಫಲವಾದಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ.

You may also like