Home » Award: ಡಾ.ಜೆ .ಸೋಮಣ್ಣ ಹಾಗೂ ಪಿ.ಬಿ.ವೀಣಾ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ: ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Award: ಡಾ.ಜೆ .ಸೋಮಣ್ಣ ಹಾಗೂ ಪಿ.ಬಿ.ವೀಣಾ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ: ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

0 comments

Award: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ವಿಜಯ ಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರೂ ಆದ ಸಾಹಿತಿ, ಲೇಖಕ ಡಾ.ಜೆ .ಸೋಮಣ್ಣ ಹಾಗೂ ಹುಣಸೂರು ತಾಲ್ಲೂಕಿನ ನಾಗಪುರದ ಭಾರತೀಯ ಗಿರಿಜನ ಪುನರ್ವಸತಿ ಕೇಂದ್ರದ ಮುಖ್ಯಸ್ಥೆ ಪಿ.ಬಿ.ವೀಣಾ ಅವರಿಗೆ 2025 ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಬುಧವಾರ( ಜೂನ್ 4 ರಂದು ) ಮೈಸೂರಿನ ಕಲಾಮಂದಿರದಲ್ಲಿ ಕನ್ನಡ ಮತ್ತು.ಸಂಸ್ಕೃತಿ ಇಲಾಖೆ ಮೂಲಕ ಆಯೋಜಿಸಿದ್ದ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ .ಡಾ ಎಚ್ .ಸಿ.ಮಹಾದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಗಾಗಿ ಡಾ ಜೆ.ಸೋಮಣ್ಣ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಕೊಡಗಿನ ಡಾ ಜೆ.ಸೋಮಣ್ಣ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಹುಣಸೂರಿನ ಗಿರಿಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದ ದಿವಂಗತ ಎಂ.ಬಿ.ಪ್ರಭು ಅವರ ಪತ್ನಿ ಪಿ.ಬಿ.ವೀಣಾ ಅವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಮೈಸೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ 20 ಮಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ವಿಧಾನ ಪರಿಷತ್ ಸದಸ್ಯ ಡಾ .ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್, ಉಪನ್ಯಾಸಕಿ ಡಾ . ಅನಿತಾ ಹಾಜರಿದ್ದರು.

You may also like