Home » Udupi: ಪ್ರತಿಷ್ಠಿತ `ಆರ್ಯಭಟ’ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಉಡುಪಿಯ ಡಾ. ವಿಕ್ರಮ್ ಜೈನ್!!

Udupi: ಪ್ರತಿಷ್ಠಿತ `ಆರ್ಯಭಟ’ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಉಡುಪಿಯ ಡಾ. ವಿಕ್ರಮ್ ಜೈನ್!!

0 comments

Udupi: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನಿರ್ದೇಶಕರಲ್ಲಿ ಒಬ್ಬರಾಗಿರುವ ನೇತ್ರ ತಜ್ಞ ವಿಕ್ರಮ್ ಜೈನ್ ಅವರು ಪ್ರಸಕ್ತ ಸಾಲಿನ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಳೆದ ಇಪ್ಪತ್ತು ವರ್ಷಗಳಿಂದ ನೇತ್ರ ಆರೋಗ್ಯ ರಕ್ಷಣಾ ಸೇವೆಯಲ್ಲಿ ನಿರತರಾಗಿರುವ ವಿಕ್ರಮ್ ಜೈನ್ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ‌. ಪ್ರತೀ ವರ್ಷ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ಇಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಇಂದು ಡಾ. ವಿಕ್ರಮ್ ಜೈನ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

You may also like