Home » Drone Pratap: ಡ್ರೋನ್ ಪ್ರತಾಪ್ ಅರೆಸ್ಟ್ !

Drone Pratap: ಡ್ರೋನ್ ಪ್ರತಾಪ್ ಅರೆಸ್ಟ್ !

0 comments

Drone Pratap: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಪ್ರಕರಣದ ಆರೋಪದಡಿ ಇದೀಗ ಬಿಗ್​ಬಾಸ್​ ಖ್ಯಾತಿಯ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಹೌದು, ಸೈನ್ಸ್ ವಿಡಿಯೋ ಹೆಸರಿನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದು, ಈ ಮೂಲಕ ಮತ್ತೆ ಎಡವಟ್ಟು ಮಾಡಿಕೊಂಡಿದ್ದರು. ಅದ್ರಲ್ಲಿ ನಿರ್ಜನ ಪ್ರದರ್ಶನದ ಕೃಷಿ ಹೊಂಡವೊಂದರಲ್ಲಿ ಪ್ರತಾಪ್ ಸೋಡಿಯಂ ಮೆಟಲ್ ಬಳಸಿಕೊಂಡು, ಅದು ನೀರಿಗೆ ಬೆರೆತಾಗ ಹೇಗೆ ಸ್ಫೋಟವಾಗುತ್ತೆ ನೋಡಿ ಎಂಬ ಎಕ್ಸಪೆರಿಮೆಂಟ್​ ಮಾಡಿದ್ದನ್ನು ಕಾಣಬಹುದು. ಅಲ್ಲದೆ ನೀರಿಗೆ ಸೋಡಿಯಂ ಮೆಟಲ್ ಹಾಕುತ್ತಿದ್ದಂತೆ ಅದು ತಕ್ಷಣ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿದ್ದಲ್ಲದೇ, ಶಬ್ಧ ಕೂಡ ದೊಡ್ಡ ಪ್ರಮಾಣದಲ್ಲೇ ಕೇಳಿಸಿತ್ತು. ಇದು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಾಪ್ ಹುಚ್ಚಾಟಕ್ಕೆ ಕಿಡಿ ಕಾರಿದ್ದರು.

ಅಷ್ಟೇ ಅಲ್ಲದೆ ಘಟನೆ ಸಂಬಂಧ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಪೊಲೀಸರು ಡ್ರೋನ್​ ಪ್ರತಾಪ್ ರನ್ನು ಬಂಧಿಸಿದ್ದಾರೆ. ಪ್ರತಾಪ್ ಸೈನ್ಸ್​ ಹೆಸರಲ್ಲಿ ಇದೆಂಥಾ ಹುಚ್ಚಾಟ ಮಾಡುತ್ತಿದ್ದಾನೆ ಎಂತಲೂ ಕೆಲ ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

You may also like

Leave a Comment