Home » Edible oil: ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಪ್ರಲ್ಹಾದ್ ಜೋಶಿ

Edible oil: ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಪ್ರಲ್ಹಾದ್ ಜೋಶಿ

0 comments

Edible oil: ಖಾದ್ಯ ತೈಲ ವಲಯದಲ್ಲಿ ಹೆಚ್ಚಿನ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆಗಾಗಿ ಕೇಂದ್ರ ಸರ್ಕಾರ 2011ರ VOPPA ಆದೇಶಕ್ಕೆ ತಿದ್ದುಪಡಿ ತಂದಿದ್ದು, ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

ತರಕಾರಿ ತೈಲ ಉತ್ಪನ್ನಗಳು, ಉತ್ಪಾದನೆ ಮತ್ತು ಲಭ್ಯತೆ (ನಿಯಂತ್ರಣ) ಆದೇಶ-2011 (VOPPA)ಕ್ಕೆ ಪ್ರಮುಖ ತಿದ್ದುಪಡಿ ಆಗಿದೆ. ತಿದ್ದುಪಡಿ ಆದೇಶದಂತೆ ಖಾದ್ಯ ತೈಲ ಪೂರೈಕೆಯಲ್ಲಿ ಭಾಗಿಯಾಗಿರುವ ಎಲ್ಲ ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು, ಮಿಶ್ರಣಕಾರರು, ಮರು-ಪ್ಯಾಕರ್‌ಗಳು ಮತ್ತಿತರ ಪಾಲುದಾರರ ನೋಂದಣಿ ಕಡ್ಡಾಯ. ಅಲ್ಲದೇ, ಆನ್‌ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ರಿಟರ್ನ್‌ ಸಲ್ಲಿಕೆಯೂ ಸಹ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲ ಖಾದ್ಯ ತೈಲ (Edible oil) ಸಂಬಂಧಿತ ಘಟಕಗಳು https://www.nsws.gov.in ನಲ್ಲಿ ರಾಷ್ಟ್ರೀಯ ಏಕ ವಿಂಡೋ ವ್ಯವಸ್ಥೆ ಮೂಲಕ ನೋಂದಾಯಿಸಿಕೊಳ್ಳಬೇಕು. ನಂತರ, ಘಟಕಗಳು ಮಾಸಿಕ ಉತ್ಪಾದನೆ, ಸ್ಟಾಕ್ ಮತ್ತು ಲಭ್ಯತೆಯ ರಿಟರ್ನ್‌ಗಳನ್ನು https://www.edibleoilindia.in ಮೂಲಕ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಒಂದು ವೇಳೆ ಆದೇಶ ಉಲ್ಲಂಘಿಸಿದರೆ, ಈ ತಿದ್ದುಪಡಿ VOPPA ಆದೇಶ-2025 ಅನ್ನು ಪಾಲಿಸದಿದ್ದರೆ, ನೋಂದಣಿ, ರಿಟರ್ನ್‌ ಸಲ್ಲಿಸಲು ವಿಫಲವಾದ ತೈಲ ಘಟಕಗಳ ವಿರುದ್ಧ ದಂಡ ವಿಧಿಸುವ ಜತೆಗೆ VOPPA ಆದೇಶ ಉಲ್ಲಂಘನೆ ಎಂದು ಪರಿಗಣಿಸಿ ಕಾಯ್ದೆ 2008ರ ನಿಬಂಧನೆಯಡಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

You may also like