Congress: ಸಿಎಂ ಸಿದ್ದರಾಮಯ್ಯ(CM Siddaramaiah) ಏಪ್ರಿಲ್ 2ರಂದು ಹೈಕಮಾಂಡ್(High command) ಭೇಟಿಗಾಗಿ ದೆಹಲಿಗೆ(Delhi) ತೆರಳಲು ಮುಂದಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ನ(Legislative Council) ನಾಲ್ಕು ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದಾರೆಂದು ವರದಿಯಾಗಿದೆ. ಸಿ.ಪಿ.ಯೋಗೇಶ್ವರ್, ಪ್ರಕಾಶ್ ರಾಠೋಡ್, ಕೆ.ಎಂ.ತಿಪ್ಪೇಸ್ವಾಮಿ, ಯು.ಬಿ.ವೆಂಕಟೇಶ್ ಅವಧಿ ಪೂರ್ಣಗೊಂಡಿದ್ದರಿಂದ ಈ ಸ್ಥಾನಗಳು ತೆರವಾಗಿವೆ.
ಕಾಂಗ್ರೆಸ್, ಸದ್ಯ ಸ್ಥಾನಗಳನ್ನು ಯಾವ ಸಮುದಾಯದಿಂದ ತೆರವಾಗಿದೆಯೋ ಅದೇ ಸಮುದಾಯಕ್ಕೆ ಬಹುತೇಕ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಒಕ್ಕಲಿಗ, ಎಸ್‌ಸಿ, ಹಿಂದುಳಿದ ವರ್ಗ ಹಾಗೂ ಬ್ರಾಹ್ಮಣ ಸಮುದಾಯಕ್ಕೆ ಈ ಸ್ಥಾನ ಲಭ್ಯವಾಗಬೇಕು. ಆದರೆ ಬ್ರಾಹ್ಮಣ ಸಮುದಾಯದ ಬದಲಾಗಿ ಕ್ರಿಶ್ಚಿಯನ್ ಸಮುದಾಯಕ್ಕೆ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ನಾಯಕರು ಸ್ಥಾನ ಪಡೆಯಲು ತೀವ್ರ ಪೈಪೋಟಿ ಆರಂಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ.
