5
ಬೆಂಗಳೂರು: ಗೀತಂ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿ ನಡೆದಿದೆ.
ಉಗಾಂಡಾದ ವಿದ್ಯಾರ್ಥಿನಿ ಹಸೀನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.
ಈ ಘಟನೆ ಬಳಿಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು,ಹಾಸ್ಟೆಲ್ ಮತ್ತು ಕಾಲೇಜುಗಳ ಕಿಟಕಿ, ಗಾಜುಗಳನ್ನು ಒಡೆದುಹಾಕಿದ್ದಾರೆ. ಹಾಸ್ಟೆಲ್ ಮತ್ತು ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭದ್ರತೆ ಕೈಗೊಂಡಿದ್ದಾರೆ.
ನಾಗದೇನಹಳ್ಳಿ ಗೀತಂ ವಿವಿ ಕ್ಯಾಂಪಸ್ ನಲ್ಲಿ ಒಂದು ವಾರದಿಂದ ಆಂಧ್ರ ಪ್ರದೇಶ ಮತ್ತು ಕರ್ನಾಟಕ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆಯುತ್ತಿದ್ದು, ಇದರಿಂದ ಆಕೆ ರೋಸಿಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಲೇಜಿನಲ್ಲಿ ಗಲಭೆ ನಡೆದರೂ ಆಡಳಿತ ಮಂಡಳಿ ಯಾವುದೇ ನಿರ್ಧಾರ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದೆ ಎನ್ನಲಾಗಿದೆ.
