Home » Puttur: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ 2025” ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Puttur: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ 2025” ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

by ಕಾವ್ಯ ವಾಣಿ
0 comments

Puttur: ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ
ಪದವಿಪೂರ್ವ ಕಾಲೇಜುನಲ್ಲಿ ಈ ವರ್ಷ ಏಪ್ರಿಲ್ 7 ರಿಂದ 12 ರ ವರೆಗೆ
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ
“ಯುರೇಕಾ-2025” ನಡೆಯಲಿದೆ.

ಆರು ದಿನಗಳ ಕಾಲ
ನಡೆಯುವ ಈ ಶಿಬಿರದಲ್ಲಿ ರಾಷ್ಟ್ರಮಟ್ಟದ ಸಂಪನ್ಮೂಲ
ವ್ಯಕ್ತಿಗಳು ಅವಧಿಗಳನ್ನು ನಡೆಸಿಕೊಡಲಿದ್ದಾರೆ. ವ್ಯಕ್ತಿತ್ವ ವಿಕಸನ, ಜೀವನ
ಕೌಶಲ್ಯ, ತಂತ್ರಜ್ಞಾನ, ಕಲೆ, ವಾಣಿಜ್ಯ, ವಿಜ್ಞಾನ ಹೀಗೆ ಹತ್ತು
ಹಲವು ವಿಷಯಗಳ ಬಗ್ಗೆ ವಿವಿಧ ಅವಧಿಗಳು ಹಾಗೂ ಚಟುವಟಿಕೆಗಳು ನಡೆಯಲಿವೆ.

ದಕ್ಷಿಣ ಕನ್ನಡ ಹಾಗೂ
ಕಾಸರಗೋಡು ಜಿಲ್ಲೆಗಳನ್ನೊಳಗೊಂಡoತೆ ರಾಜ್ಯದ ವಿವಿಧ
ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆಯಿದ್ದು,
ದೂರದೂರುಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಕಾಲೇಜಿನ
ವತಿಯಿಂದ ಉಚಿತ ವಸತಿ ವ್ಯವಸ್ಥೆಯನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು ಕಾಲೇಜಿನ
ಜಾಲತಾಣ WWW.VIVEKANADAPUC.COM ನಲ್ಲಿ ತಮ್ಮ ಹೆಸರನ್ನು ಏಪ್ರಿಲ್ 5
ರ ಒಳಗಾಗಿ ನೊಂದಾಯಿಸಬಹುದಾಗಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ
ಪ್ರಮಾಣಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ
9844665385, 8904791909, 8971634042 ಸಂಪರ್ಕ
ಸoಖ್ಯೆಗಳನ್ನು ಸಂಪರ್ಕಿಸಬಹುದು.

You may also like