Home » Prajwal Revanna: JDS ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ ?! ಜಿ ಟಿ ದೇವೇಗೌಡ ಹೇಳಿದ್ದೇನು ?

Prajwal Revanna: JDS ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ ?! ಜಿ ಟಿ ದೇವೇಗೌಡ ಹೇಳಿದ್ದೇನು ?

6 comments
Prajwal Revanna

Prajwal Revanna: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ವಿಚಾರ ರಾಜ್ಯದ್ಯಾಂತ ಸದ್ದುಮಾಡುತ್ತಿದೆ. ಲೈಂಗಿಕ ದೌರ್ಜನ್ಯ ವಿಚಾರದ ಸುಳಿಯಲ್ಲಿ ಸಿಲುಕಿರುವ ಪ್ರಜ್ವಲ್ ನಿಂದ ಇದೀಗ ಮೈತ್ರಿ ಪಕ್ಷಗಳಿಗೆ ಇರುಸು ಮುರುಸು ಉಂಟಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡುತ್ತಾರಾ? ಎನ್ನುವ ಸುದ್ದಿಯೊಂದು ಇದೀಗ ಭಾರೀ ಚರ್ಚೆಯಾಗುತ್ತಿದೆ.

ಹೌದು, ಹಾಸನ ಜೆಡಿಎಸ್‌(JDS) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ ಕುರಿತಂತೆ ಜೆಡಿಎಸ್ (JDS) ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ (GT Devegowda) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ಯಾವುದೇ ತನಿಖೆ ನಡೆಸಿದರು ನಾವು ಸ್ವಾಗತಿಸುತ್ತೇವೆ ಜೊತೆಗೆ ಸ್ಪಂದಿಸುತ್ತೇವೆ ಎಂದು ಹೇಳಿದ್ದಾರೆ. ಇದೀಗ ಸರ್ಕಾರ ಆದೇಶಿಸಿರುವ ಎಸ್‌ಐಟಿ ತನಿಖೆಯನ್ನೂ ಸ್ವಾಗತ ಮಾಡ್ತೀನಿ ಎಂದಿದ್ದಾರೆ.

ಅಂದಹಾಗೆ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಜಿಟಿಡಿ, ಈ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀನಿ. ಎಲ್ಲವನ್ನೂ ನಮ್ಮ ಪಕ್ಷದಲ್ಲಿ ಹೈಕಮಾಂಡ್ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ(CM Siddaramaiah) ಹೇಳಿದ್ದೇನು?
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಾಸನೆ ಬರ್ತಾ ಇರೋ ನಿಮ್ಮ ಟಾಯ್ಲೆಟ್ ರೂಮ್ ಗೆ ಇದೊಂದು ಹಾಕಿ ಸಾಕು, ಕ್ಲೀನ್ ಆಗುತ್ತೆ!

You may also like

Leave a Comment