Home » ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು

ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು

by Praveen Chennavara
0 comments

ಮಡಿಕೇರಿ : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ.

ನಾಮೇರ ಉದಯ ಎಂಬವರ ಮಕ್ಕಳಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು.

ದಮಯಂತಿ ಅವರು ಹಳ್ಳಿಗಟ್ಟು ಸಿಇಟಿ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಮತ್ತು ಹರ್ಷಿತಾ ಗೋಣಿಕೊಪ್ಪ ಕಾವೇರಿ ಕಾಲೇಜ್ ನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿದ್ದಾಳೆ.

ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

You may also like

Leave a Comment