Home » ಪ್ರಖ್ಯಾತ ನಟ ಶರತ್‌ ಬಾಬು ಆರೋಗ್ಯ ಸ್ಥಿತಿ ಗಂಭೀರ, ಚೆನ್ನೈನ ಆಸ್ಪತ್ರೆಗೆ ದಾಖಲು!

ಪ್ರಖ್ಯಾತ ನಟ ಶರತ್‌ ಬಾಬು ಆರೋಗ್ಯ ಸ್ಥಿತಿ ಗಂಭೀರ, ಚೆನ್ನೈನ ಆಸ್ಪತ್ರೆಗೆ ದಾಖಲು!

0 comments
Actor Sarath Babu

Actor Sarath Babu : ಬಹುಭಾಷಾ ನಟ ಶರತ್‌ ಬಾಬು(Actor Sarath Babu )71 ವರ್ಷ ವಯಸ್ಸಿನ  ಆರೋಗ್ಯಸ್ಥಿತಿ ಗಂಭೀರವಾಗಿದ್ದು,ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಹಿನ್ನಲೆಯಲ್ಲಿ ಬುಧವಾರ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕನ್ನಡದ ಹಲವು ಪ್ರಖ್ಯಾತ ಚಿತ್ರಗಳಲ್ಲಿ ನಟಿಸಿದ್ದ, ರಮೇಶ್‌, ಸುಹಾನಿಸಿ ನಟಿಸಿದ್ದ ಅಮೃತವರ್ಷಿಣಿ ಚಿತ್ರದಲ್ಲಿ ‘ಹೇಮಂತ್‌’ ಮಾತ್ರದಲ್ಲಿ ಅಭಿನಯಿಸಿದ್ದ ಬಹುಭಾಷಾ ನಟ ಶರತ್‌ ಬಾಬು ಎಂದು ಗುರುತಿಸಲಾಗಿದೆ. ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಭಾಷೆಯ ಚಿತ್ರಗಳಲ್ಲೂ ನಟಿಸಿದ್ದರು. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹೊರಬಂದಿಲ್ಲ. ಶರತ್‌ ಬಾಬು ಅವರನ್ನು ನೋಡಲು ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.  1973ರಲ್ಲಿ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದ ಶರತ್‌ ಬಾಬು, ರಾಮರಾಜ್ಯಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಮುಳ್ಳ ಬಂಧಂ, ಸೀತಕೋಕ ಚಿಲುಕ, ಸಂಸಾರ ಒಂದು ಚದರಂಗಂ, ಅಣ್ಣಯ್ಯ, ಆಪದ್ಭಾಂದವುಡು ಮುಂತಾದ ಅದ್ಭುತ ಚಿತ್ರಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ನೆಗೆಟಿವ್ ರೋಲ್‌ಗಳಲ್ಲೂ ಅವರು ಮಿಂಚಿದ್ದರು.

ಅಭಿಮಾನಿಗಳು ಕೂಡ ಶರತ್‌ ಬಾಬು ಆರೋಗ್ಯದಲ್ಲಿ ಶೀಘ್ರದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಶರತ್‌ ಬಾಬು ಅವರ ಆರೋಗ್ಯ ಹದಗೆಟ್ಟಿರುವ ಕುರಿತಾಗಿ ತೆಲುಗು ನಟಿ ಕಲ್ಯಾಣಿ ಪಾದಲಾ (ಕರಾಟೆ ಕಲ್ಯಾಣಿ) ಬರೆದುಕೊಂಡಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಮಾಹಿತಿ ನೀಡಿದ್ದಾರೆ.

You may also like

Leave a Comment