Home » Protest: ಅರಣ್ಯ ಇಲಾಖೆಯ ವಿರುದ್ಧ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ – ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ

Protest: ಅರಣ್ಯ ಇಲಾಖೆಯ ವಿರುದ್ಧ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ – ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ

0 comments

Protest: ಕೊಡಗು ಜಿಲ್ಲಾ ರೈತಸಂಘದಿಂದ ಇಂದು ಮಂಗಳವಾರ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕಾಡ್ಯಮಾಡ ಮನು ಸೋಮಯ್ಯನವರ ಮುಂದಾಳತ್ವದಲ್ಲಿ ಹಲವಾರು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅರಣ್ಯ ಇಲಾಖೆಯ ವಿರುದ್ದ ತಿತಿಮತಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಮೊದಲಿಗೆ ತಿತಿಮತಿ ಪುರದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ರೈತ ಸಂಘದ ಪ್ರಮುಖರು, ವಿವಿಧ ಸಂಘಟನೆಗಳ ಪ್ರಮುಖರು, ಜಿಲ್ಲೆಯ ವಿವಿಧ ಭಾಗದ ರೈತರುಗಳು ಕಾಫಿ ಬೆಳೆಗಾರರು ಅರಣ್ಯ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು. ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ವನ್ಯ ಪ್ರಾಣಿ – ಮಾನವ ಸಂಘರ್ಷ ಹಿಂದೆಂದಿಗಿಂತಲೂ ಗಂಭೀರ ಸ್ಥಿತಿಯನ್ನು ತಲುಪಿದ್ದು, ರೈತರು ಅಳಿವು-ಉಳಿವಿನ ಹಂತವನ್ನು ತಲುಪಿದ್ದಾರೆ.

ಕೊಡಗು ಸೇರಿದಂತೆ ರಾಜ್ಯದ ಹಲವು ಕಡೆ ಪ್ರಾಣಿಗಳ ಉಪಟಳ ಹೆಚ್ಚಾಗುತ್ತಿದೆ. ಇದಕ್ಕೆ ಅರಣ್ಯ ಇಲಾಖೆ ಸರಿಯಾದ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರು ಸೇರಿದಂತೆ ನಾಗರೀಕರು ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ತಿತಿಮತಿಯ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ಕೂಡ ಏರ್ಪಡಿಸಲಾಗಿದೆ. ಸಭೆಯಲ್ಲಿ ಈ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ: Ramya Case: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಒಟ್ಟು 48 ಮಂದಿಯ ಐಪಿ ಅಡ್ರೆಸ್ ಪಡೆದ ಪೊಲೀಸರು

You may also like