0
Vidhanasoudha: ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರಕಾರ ಮುಂದಾಗಿರುವ ಕುರಿತು ವರದಿಯಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್ ಗೈಡ್ ಏರ್ಪಡಿಸಲಾಗಿದೆ. ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಟೂರ್ ಗೈಡ್ ಇರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿ ಮಾಡಿ ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗಿದೆ.
ಪ್ರವಾಸೋದ್ಯಮ ಇಲಾಖೆಗೆ ಷರತ್ತುಬದ್ಧವಾಗಿ ಸರಕಾರ ಅನುಮತಿ ನೀಡಿದೆ. ಪ್ರವೇಶ ಶುಲ್ಕ ನೀಡಿ ಒಳಗೆ ಬರಲು ಆದೇಶವನ್ನೂ ಮಾಡಿರುವ ಸರಕಾರ, ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎನ್ನುವುದರ ಕುರಿತು ನಿರ್ಧಾರ ಮಾಡಿಲ್ಲ.
