Home » Micro finance: ಆರ್ಥಿಕ ಮುಗ್ಗಟ್ಟು – ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸಿತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ

Micro finance: ಆರ್ಥಿಕ ಮುಗ್ಗಟ್ಟು – ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸಿತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ

0 comments

Micro finance: ಮಡಿಕೇರಿಯ ಮಹಿಳಾ ಸಮಾಜದ ಗೋಡೌನ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ನವರ ಹಾವಳಿಯಿಂದ ಬೇಸಿತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟಿನಲ್ಲಿ ಬರೆಯಲಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ಹಾವಳಿ ಮಿತಿಮೀರಿದ್ದು ಇದನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

You may also like