Home » Sonu nigam: ಸೋನು ನಿಗಮ್ ಮೇಲೆ ಎಫ್‌ಐಆ‌ರ್ ದಾಖಲು!

Sonu nigam: ಸೋನು ನಿಗಮ್ ಮೇಲೆ ಎಫ್‌ಐಆ‌ರ್ ದಾಖಲು!

0 comments

Sonu nigam: ಕೆಲವು ದಿನಗಳ ಹಿಂದೆ ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿಕೊಂಡಾಗ ಸೋನು ನಿಗಮ್ (Sonu nigam) ಕನ್ನಡಿಗರ ಅಭಿಮಾನವನ್ನು ಪಹಲ್ಲಾಮ್ ದಾಳಿಗೆ ಹೋಲಿಸಿದ್ದು ಈ ಹಿನ್ನೆಲೆಯಲ್ಲಿ ಅವರ ಮೇಲೆ ಎಫ್‌ಐಆ‌ರ್ ದಾಖಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಅವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ, ಬಿಎನ್‌ಎಸ್‌ 351 (1) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 351 (2) (ಕ್ರಿಮಿನಲ್ ಮಾನಹಾನಿ), 353 (ಧಾರ್ಮಿಕ ಮತ್ತು ಭಾಷಿಕ ಭಾವನೆಗಳನ್ನ ಕೆರಳಿಸುವುದು) ಬಿಎನ್‌ಎಸ್ 352 (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಸೆಕ್ಷನ್‌ನಡಿ ಎಫ್‌ಐಆರ್ ದಾಖಲಿಸಲಾಗಿದೆ.

You may also like