Home » Fire accident: ಮಾಜಿ ಸಚಿವರ ಆಯಿಲ್ ಗೋದಾಮಿನಲ್ಲಿ ಬೆಂಕಿ ಅವಘಡ : 30 ಕೋಟಿ ರೂ. ನಷ್ಟ!

Fire accident: ಮಾಜಿ ಸಚಿವರ ಆಯಿಲ್ ಗೋದಾಮಿನಲ್ಲಿ ಬೆಂಕಿ ಅವಘಡ : 30 ಕೋಟಿ ರೂ. ನಷ್ಟ!

0 comments

Fire accident: ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ಮಾಜಿ ಸಚಿವ ಎಚ್‌ಸಿ ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪಗೆ ಸೇರಿದ್ದ ಸುಮಾರು 40 ಸಾವಿರ ಅಡಿಯ, ಆಯಿಲ್ ಗೋಡೌನ್‌ಗೆ ಬೆಂಕಿ (Fire accident) ತಗುಲಿ ಹೊತ್ತಿ ಉರಿದ ಪರಿಣಾಮ 30 ಕೋಟಿ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ಆಯಿಲ್ ಗೋಡೌನ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಗೋದಾಮು ಸಂಪೂರ್ಣ ಸುಟ್ಟು ಹೋಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ 20ಕ್ಕೂ ಹೆಚ್ಚು ಅಗ್ನಿಶಾಮಕದ ವಾಹನ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಲಾಗುತ್ತಿದೆ. ಇನ್ನು ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗೋದಾಮಿಗೆ ಬೆಂಕಿ ತಗುಲಲು ಕಾರಣ ಏನೆಂದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.

You may also like