Home » Fire accident: ಚಾರ್​ಮಿನಾರ್​ ಬಳಿ ಅಗ್ನಿ ಅವಘಡ: 6 ಮಂದಿ ಸಾವು

Fire accident: ಚಾರ್​ಮಿನಾರ್​ ಬಳಿ ಅಗ್ನಿ ಅವಘಡ: 6 ಮಂದಿ ಸಾವು

0 comments

Fire accident: ಹೈದರಾಬಾದ್​ನ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವರದಿಯ ಪ್ರಕಾರ, ಇಂದು ಮುಂಜಾನೆ ಸಂಭವಿಸಿದ ಬೆಂಕಿಯ ಅವಘಡಕ್ಕೆ (Fire accident) ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಲವಾರು ಜನರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮೃತಪಟ್ಟವರಲ್ಲಿ ಕೆಲವು ಮಕ್ಕಳೂ ಸೇರಿದ್ದಾರೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಮತ್ತು ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಿರ್ದೇಶನಗಳನ್ನು ನೀಡಲಾಗಿದೆ.

You may also like