Home » Shivamogga: ಶಿವಮೊಗ್ಗದಲ್ಲಿ ನಾಪತ್ತೆಯಾಗಿದ್ದ ಐದು ಮಕ್ಕಳು ಸುರಕ್ಷಿತವಾಗಿ ಪತ್ತೆ!

Shivamogga: ಶಿವಮೊಗ್ಗದಲ್ಲಿ ನಾಪತ್ತೆಯಾಗಿದ್ದ ಐದು ಮಕ್ಕಳು ಸುರಕ್ಷಿತವಾಗಿ ಪತ್ತೆ!

0 comments

Shivamogga: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಮಾರಿ ನಾರಾಯಣಪುರ ಗ್ರಾಮದ ಬಳಿ ನಾಪತ್ತೆಯಾಗಿದ್ದ ಐವರು ಮಕ್ಕಳು ಪತ್ತೆಯಾಗಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ.

ಮೀನು ಹಿಡಿಯಲು ಹೋಗುತ್ತೇವೆ ಎಂದು ಮನೆಯಿಂದ ಹೊರ ಹೋಗಿದ್ದ ಮಕ್ಕಳು ರಾತ್ರಿ ಕುಮಾರಿ ನಾರಾಯಣಪುರ ಗ್ರಾಮದ ಬಳಿ ದೇಗುಲವೊಂದರಲ್ಲಿ ಮಲಗಿದ್ದರು. ಬೆಳಗ್ಗೆ ಮಕ್ಕಳು ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾರೆ. ಎಲ್ಲಾ ಐದು ಮಕ್ಕಳು ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.

ನಾಪತ್ತೆಯಾದ ಮಕ್ಕಳಿಗಾಗಿ ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿದ್ದರು. ಧನುಷ್‌ (14), ಚರಣ್‌ (10), ಲೋಹಿತ್‌ (12), ಲಕ್ಷ್ಮೀಶ್‌ (12) ಸೇರಿ ಐದು ಮಕ್ಕಳು ನಾಪತ್ತೆಯಾಗಿದ್ದ ಮಕ್ಕಳು.

ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

You may also like