5
Cancer: ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕ್ಯಾನ್ಸರ್ (Cancer) ಇದೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಈ ರೋಗವು ಅವರ ದೇಹದಲ್ಲಿ ವೇಗವಾಗಿ ಹರಡುತ್ತಿದ್ದು ಈಗಾಗಲೇ ಮೂಳೆಗಳಿಗೂ ಪಸರಿಸಿಕೊಂಡಿದೆ ಎಂದು ಜೋ ಬೈಡೆನ್ ಅವರ ಕಚೇರಿ ಅಧಿಕೃತವಾಗಿ ತಿಳಿಸಿದೆ.
ಎಂಬತ್ತೆರಡು ವರ್ಷ ಪ್ರಾಯವಾಗಿರುವ ಇವರು ಮೊದಲು ಮೂತ್ರವಿಸರ್ಜನೆಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ವೈದ್ಯರು ಪರೀಕ್ಷೆ ಮಾಡಿದಾಗ ಅವರಿಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದನ್ನು ದೃಢಪಡಿಸಿದ್ದಾರೆ.
ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಡೊನಾಲ್ಡ್ ಟ್ರಂಪ್ ` ಬೈಡೆನ್ ಅವರ ಆರೋಗ್ಯ ವಿಷಯ ಕೇಳಿ ನಿಜಕ್ಕೂ ಶಾಕ್ ಆಯಿತು. ಅವರ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ಜೋಬೈಡೆನ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಾವಿಸುತ್ತೇನೆ’ ಎಂದು ಪೋಸ್ಟ್ ಮಾಡಿದ್ದಾರೆ.
