Education: ಅನಾಥ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತ ಶಿಕ್ಷಣ ನೀಡುವ ಬಗ್ಗೆ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಈ ಸಂಬಂಧ 4 ವಾರಗಳಲ್ಲಿ ಅಧಿಸೂಚನೆ ಹೊರಡಿಸುವಂತೆ ನ್ಯಾಯಾಲಯ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.
ಎಷ್ಟು ಅನಾಥ ಮಕ್ಕಳಿದ್ದಾರೆ ಮತ್ತು ಅವರಲ್ಲಿ ಎಷ್ಟು ಮಂದಿ ಶಾಲೆಗೆ ಪ್ರವೇಶ ಪಡೆದಿದ್ದಾರೆ ಎಂಬುದನ್ನು ಕಂಡುಹಿಡಿಯಲು ಸಮೀಕ್ಷೆ ನಡೆಸುವಂತೆ ನ್ಯಾಯಾಲಯವು ರಾಜ್ಯಗಳಿಗೆ ಸೂಚಿಸಿದೆ. ಅನಾಥರು, ದುರ್ಬಲ ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಮಕ್ಕಳು ಖಾಸಗಿ ಶಾಲೆಗಳಲ್ಲಿ ಶೇ.25ರಷ್ಟು ಕೋಟಾದ ಅಡಿಯಲ್ಲಿ ಉಚಿತ ಶಿಕ್ಷಣವನ್ನು ಪಡೆಯಲು ಅವಕಾಶ ನೀಡಲು ಅಧಿಸೂಚನೆಗಳನ್ನು ಹೊರಡಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ.
ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಸಂಬಂಧ ವಕೀಲ ಪೌಲೋಮಿ ಪವನ್ ಶುಕ್ಲಾ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ದುರ್ಬಲ ವರ್ಗಗಳ ಮಕ್ಕಳಿಗೆ ನಿಗದಿಪಡಿಸಿದ ಶೇಕಡಾ 25 ರ ಕೋಟಾದ ಅಡಿಯಲ್ಲಿ ಶಾಲೆಗಳಲ್ಲಿ ಅನಾಥ ಮಕ್ಕಳಿಗೆ ಪ್ರವೇಶ ನೀಡಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರ ಪೀಠವು ಈ
ಅರ್ಜಿಯನ್ನು ಮಹತ್ವದ್ದಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: Gujarath: ಭಾರತದ ಮೇಲೆ ದಾಳಿ ನಡೆಸಿ – ಬೆಂಗಳೂರಿಂದಲೇ ಪಾಕ್ ಸೇನಾ ಮುಖ್ಯಸ್ಥಗೆ ಮನವಿ ಮಾಡಿದ್ದ ಮಹಿಳೆ
