Home » Gig Workers Bill: ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ವಿಧೇಯಕ – ಅಂಕಿತ ಹಾಕಿದ ರಾಜ್ಯಪಾಲರಿಗೆ ಅಭಿನಂದನೆ

Gig Workers Bill: ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ವಿಧೇಯಕ – ಅಂಕಿತ ಹಾಕಿದ ರಾಜ್ಯಪಾಲರಿಗೆ ಅಭಿನಂದನೆ

by ಹೊಸಕನ್ನಡ
0 comments

Gig Workers Bill: ಗಿಗ್ ವಲಯದ ಶ್ರಮಿಕರ ಕಲ್ಯಾಣಕ್ಕೆ ಮುನ್ನುಡಿ ಬರೆಯುವ, ಕಾರ್ಮಿಕ ಇಲಾಖೆಯ ಬಹು ನಿರೀಕ್ಷಿತ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆಗೆ ಮಾನ್ಯ ರಾಜ್ಯಪಾಲರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಇಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಗಿಗ್ ಕಾರ್ಮಿಕರೊಡನೆ ರಾಜಭವನಕ್ಕೆ ತೆರಳಿ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳನ್ನು ಸಲ್ಲಿಸಿ ಘನವೆತ್ತ ರಾಜ್ಯಪಾಲರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖಾ ಅಧಿಕಾರಿಗಳು ಮತ್ತಿತರರು ಪ್ರಮುಖರಿದ್ದರು.

ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಸುಗ್ರೀವಾಜ್ಞೆ, ಹಾಗೂ ಸಿವಿಲ್ ಸೇವೆಗಳ ತಿದ್ದುಪಡಿ ಸುಗ್ರೀವಾಜ್ಞೆ, ಮತ್ತು ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಸುಗ್ರೀವಾಜ್ಞೆಗೆ ಮಂಗಳವಾರ ಘನತೆವೆತ್ತ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್ ಅವರು ಸಹಿ ಹಾಕಿದ್ದರು. ಹಾಗಾಗಿ ರಾಜ್ಯಪಾಲರಿಂದ ಒಪ್ಪಿಗೆ ದೊರೆತ ಕೂಡಲೇ ಈ ಕಾಯ್ದೆಗಳ ಜಾರಿಗೆ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಇ-ಕಾಮರ್ಸ್‌ ಹಾಗೂ ಫುಡ್‌ ಡೆಲಿವರಿ ಕಂಪನಿಗಳ ಡೆಲಿವರಿ ಬಾಯ್ಸ್‌ಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಈ ಸುಗ್ರೀವಾಜ್ಞೆ ರೂಪಿಸಿತ್ತು. ರಾಜ್ಯದಲ್ಲಿ ಗಿಗ್ ಕಾರ್ಮಿಕರ ಸಂಖ್ಯೆ ಒಟ್ಟು 2.30 ಲಕ್ಷದಷ್ಟಿದೆ. ಆದರೆ ಇವರಿಗೆ ಯಾವುದೇ ಅಪಘಾತ ಪರಿಹಾರದಂತ ಸರ್ಕಾರಿ ಸೌಲಭ್ಯಗಳು ಇರಲಿಲ್ಲ. ಹಾಗಾಗಿ ಈ ಕಾರ್ಮಿಕರಿಗೆ ಅಪಘಾತ ಅಥವಾ ಮರಣ ಸಮಯದಲ್ಲಿ ಅವರನ್ನು ನಂಬಿದ ಕುಟುಂಬದವರು ಸಂಕಷ್ಟಕ್ಕೆ ಎದುರಿಸಬೇಕಾಗುತ್ತದೆ. ಹಾಗಾಗಿ ಗಿಗ್ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತೆಯನ್ನು ಒದಗಿಸುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿಧೇಯಕ – 2024 ಅನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ.

You may also like