Home » ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಲೈಂಗಿಕ ದೌರ್ಜನ್ಯ | ಬೆಳ್ತಂಗಡಿಯ ಯುವಕ ಅರೆಸ್ಟ್

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಲೈಂಗಿಕ ದೌರ್ಜನ್ಯ | ಬೆಳ್ತಂಗಡಿಯ ಯುವಕ ಅರೆಸ್ಟ್

0 comments

ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿದ ಯುವಕನೋರ್ವ ಬಳಿಕ ಆಕೆಗೆ ಜೀವಬೆದರಿಕೆಯೊಡ್ಡಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬಂಗೇರಕಟ್ಟೆ ನಿವಾಸಿ ನವಾಜ್ ಎಂಬಾತ ಈ ಕೃತ್ಯವೆಸಗಿದ ಆರೋಪಿ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿ

ಕಳೆದ ಮೂರು ವರ್ಷದ ಹಿಂದೆ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ. ಆಕೆಯ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿಕೊಂಡು, ಆಗಾಗ ಬಂದು ಬಾಲಕಿಗೆ ಜೀವಬೆದರಿಕೆ ಒಡ್ಡಿ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈತನ ಕೃತ್ಯದಿಂದ ನೊಂದ ಬಾಲಕಿ ಮನೆಮಂದಿಗೆ ವಿಷಯ ತಿಳಿಸಿದ್ದು, ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಲಕಿಯ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ನವಾಜ್ ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

You may also like

Leave a Comment