Home » Bigg Boss: ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ: ಜಾಲಿವುಡ್ ಆಡಳಿತ ಮಂಡಳಿ

Bigg Boss: ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ: ಜಾಲಿವುಡ್ ಆಡಳಿತ ಮಂಡಳಿ

0 comments

Bigg Boss: ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್‌ಬಾಸ್ ಸೀಸನ್ 12ರ ಶೋ ನಡೆಯುತ್ತಿದೆ. ಆದರೆ ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ ಬಿಗ್‌ಬಾಸ್‌ (Bigg Boss) ಮನೆಗೆ ಬೀಗ ಜಡಿದ ಬೆನ್ನಲ್ಲೇ ರಾಮನಗರ ಡಿಸಿ (Ramanagar DC Office) ಕಚೇರಿಗೆ ಜಾಲಿವುಡ್ (Jollywood) ಆಡಳಿತ ಮಂಡಳಿ ಭೇಟಿ ನೀಡಿದ್ದು, 15 ದಿನ ಕಾಲಾವಕಾಶ ಕೇಳಿ ಮನವಿ ಸಲ್ಲಿಸಿದೆ.

ಸ್ಟುಡಿಯೋದಲ್ಲಿ 400ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡ್ತಿದ್ದಾರೆ. ಹೀಗೆ ಏಕಾಏಕಿ ಬಂದ್ ಮಾಡಿದರೆ ಕಾರ್ಮಿಕರ ಕೆಲಸಕ್ಕೆ ಕುತ್ತು ಬೀಳಲಿದೆ. ನಮ್ಮಿಂದ ತಪ್ಪಾಗಿದೆ, ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ ಎಂದು ಜಾಲಿವುಡ್ ಆಡಳಿತ ಮಂಡಳಿ ಡಿಸಿ ಬಳಿ ಕೇಳಿಕೊಂಡಿದೆ.

ಇದನ್ನೂ ಓದಿ;Health tips: ಅನಗತ್ಯವಾಗಿ ಮಾಡಲಾಗುತ್ತಿದೆ ಗರ್ಭಾಶಯ ತೆಗೆಯುವ ಶಸ್ತ್ರ ಚಿಕಿತ್ಸೆ : ಸಂಶೋಧನೆಯಿಂದ ಬಹಿರಂಗ! ಇದು ನಿಜವೇ?

ಸದ್ಯ ಜಾಲಿವುಡ್ ಆಡಳಿತ ಮಂಡಳಿ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸುತ್ತಿದೆ. ಮಾತುಕತೆ ಫಲಪ್ರದವಾದರೆ ಜಿಲ್ಲಾಧಿಕಾರಿಯವರು ಷರತ್ತು ಬದ್ಧ ಅನುಮತಿ ನೀಡಿದರೆ ಇಂದೇ ಜಾಲಿವುಡ್ ಸ್ಟುಡಿಯೋ ಓಪನ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

You may also like