Actress Ranya Rao: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ವಿಚಾರಣೆ ಇದ್ದು, ಕಸ್ಟಡಿಗೆ ನೀಡುವ ವಿಚಾರ ಕುರಿತ ಆದೇಶವನ್ನು ನಾಳೆ (ಮಾ.7) ನೀಡುವುದಾಗಿ ಕೋರ್ಟ್ ಮುಂದೂಡಿದೆ.
ಬೆಂಗಳೂರಿನ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಡಿಆರ್‌ಐ ಅಧಿಕಾರಿಗಳು ರನ್ಯಾ ರಾವ್ ಅವರನ್ನು ಕಸ್ಟಡಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮೂರು ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಡಿಆರ್‌ಐ ಅಧಿಕಾರಿಗಳು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿತ್ತು.
ಇದರ ವಿಚಾರಣೆ ಮುಗಿದ ನಂತರ ಜಾಮೀನು ಅರ್ಜಿ ವಿಲೇವಾರಿ ಮಾಡುವುದಾಗಿ ಕೋರ್ಟ್ ಹೇಳಿರುವ ಕುರಿತು ವರದಿಯಾಗಿದೆ.
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಪ್ರಕರಣ ಇದಾಗಿರುವ ಕಾರಣ ಹೆಚ್ಚಿನ ತನಿಖೆಗೆ ಆಕೆಯನ್ನು ಕಸ್ಟಡಿಗೆ ನೀಡಬೇಕು ಎಂದು ಡಿಆರ್‌ಐ
