Home » ರಾಜ್ಯದ ಜನತೆಗೆ ಸಿಹಿ ಸುದ್ದಿ : ಇನ್ನು ಮುಂದೆ ಸ್ಪೀಡ್ ಪೋಸ್ಟ್ ಮೂಲಕ `ಮನೆ ಬಾಗಿಲಿಗೇ ಜನನ, ಮರಣ ಪ್ರಮಾಣ ಪತ್ರ’!

ರಾಜ್ಯದ ಜನತೆಗೆ ಸಿಹಿ ಸುದ್ದಿ : ಇನ್ನು ಮುಂದೆ ಸ್ಪೀಡ್ ಪೋಸ್ಟ್ ಮೂಲಕ `ಮನೆ ಬಾಗಿಲಿಗೇ ಜನನ, ಮರಣ ಪ್ರಮಾಣ ಪತ್ರ’!

by Mallika
1,295 comments

ಇನ್ನು ಮುಂದೆ ರಾಜ್ಯದ ಜನರ ಮನೆಬಾಗಿಲಿಗೆ ಜನನ ಮರಣ ಪತ್ರಗಳು ಬರಲಿದ್ದು, ಈ ಕುರಿತು ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಿದೆ ಎನ್ನಲಾಗಿದೆ.

ಹೀಗಾಗಿ ಇನ್ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.

ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಿದ್ದಾರೆ.

You may also like

Leave a Comment