Home » ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ!

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ!

0 comments

ಸರ್ಕಾರಿ ಶಾಲೆಗಳ ಸುಧಾರಣೆಗೆ ಅನೇಕ ಕ್ರಮಗಳನ್ನು ಕೈಗೊಂಡಿರುವ ಶಿಕ್ಷಣ ಇಲಾಖೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೂರಕ ವಾತಾವರಣ,ಸೌಲಭ್ಯ ಕಲ್ಪಿಸುವ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದಾರೆ.

ಅತಿ ಶೀಘ್ರದಲ್ಲಿ ಶಿಕ್ಷಣ ಇಲಾಖೆಯು 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವ ಕುರಿತು ಮಾಹಿತಿ ನೀಡಿದ್ದಾರೆ.

ಶಿಕ್ಷಣ ಇಲಾಖೆಯು ಶೀಘ್ರವೇ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರವೇ ಅಧಿಸೂಚನೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಈ ಬಳಿಕ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

You may also like

Leave a Comment