Home » Vehicle: ವಾಹನ ಸವಾರರಿಗೆ ಗುಡ್‌ನ್ಯೂಸ್! ಇನ್ಮೇಲೆ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮೇಲೆ 50% ರಿಯಾಯಿತಿ!

Vehicle: ವಾಹನ ಸವಾರರಿಗೆ ಗುಡ್‌ನ್ಯೂಸ್! ಇನ್ಮೇಲೆ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮೇಲೆ 50% ರಿಯಾಯಿತಿ!

0 comments

Vehicle : ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಆಗಸ್ಟ್ 23ರಿಂದ ಸೆಪ್ಟೆಂಬ‌ರ್ 12ರವರೆಗೆ ಮಾತ್ರ ಶೇ. 50ರಷ್ಟು ರಿಯಾಯಿತಿ ದಂಡ ಪಾವತಿಗೆ ಅವಕಾಶ ನೀಡಲಾಗಿದೆ.

ಈ ಅಧಿಕೃತ ಸೂಚನೆಯನ್ನು ರಾಜ್ಯ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್‌. ಅವರು ಹೊರಡಿಸಿದ್ದು, ಇದರ ಪ್ರಕಾರ, ಸೆಪ್ಟೆಂಬ‌ರ್ 12 ರವರೆಗೆ ಈ ಯೋಜನೆ ಜಾರಿಯಲ್ಲಿದ್ದು, 2023ರ ಫೆಬ್ರವರಿ 11 ರವರೆಗೆ ಪೊಲೀಸ್ ಇಲಾಖೆಯ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಕರ್ನಾಟಕ ಸ್ಟೇಟ್ ಪೊಲೀಸ್‌ (ಕೆಎಸ್‌ಪಿ) ಆ್ಯಪ್, ಬಿಟಿಪಿ ಅಸ್ಲಂ ಆ್ಯಪ್, ಹತ್ತಿರದ ಸಂಚಾರ ಪೊಲೀಸ್‌ ಠಾಣೆ ಅಥವಾ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ದಂಡ ಪಾವತಿಸಬಹುದಾಗಿದೆ.

You may also like