Home » ರಾಜ್ಯದ ಜನತೆಗೆ ರಾಜ್ಯ ಸರಕಾರದಿಂದ ಸಿಹಿಸುದ್ದಿ!

ರಾಜ್ಯದ ಜನತೆಗೆ ರಾಜ್ಯ ಸರಕಾರದಿಂದ ಸಿಹಿಸುದ್ದಿ!

by Mallika
0 comments

ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ದೆಹಲಿ ಸರ್ಕಾರ ಸ್ಥಾಪಿಸಿರುವ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲಿಯೇ ನಮ್ಮ ಕ್ಲಿನಿಕ್ ಸ್ಥಾಪಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಸಚಿವ ಮಾಧುಸ್ವಾಮಿಯವರು, ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್ ಸ್ಥಾಪಿಸಲಾಗುವುದು. ಎಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಲ್ಲವೋ ಅಲ್ಲಿ ನಮ್ಮ ಕ್ಲಿನಿಕ್ ಕಾರ್ಯನಿರ್ವಹಿಸಲಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇವುಗಳ ಮೇಲುಸ್ತುವಾರಿ ವಹಿಸಲಿವೆ ಎಂದು ತಿಳಿಸಿದ್ದಾರೆ.

ನಮ್ಮ ಕ್ಲಿನಿಕ್ ಬೆಂಗಳೂರು ಮಹಾನಗರದ ಎಲ್ಲಾ ವಾರ್ಡ್ ಗಳು ಸೇರಿದಂತೆ ರಾಜ್ಯದ ವಿವಿಧೆಡೆ 155,77 ಕೋಟಿ ರೂ. ವೆಚ್ಚದಲ್ಲಿ 438 ನಮ್ಮ ಕ್ಲಿನಿಕ್ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಮ್ಮ ಕ್ಲಿನಿಕ್ ನಲ್ಲಿ ಒಬ್ಬ ವೈದ್ಯಾಧಿಕಾರಿ, ಶುಶೂಷಕ ಮತ್ತು ದ್ವಿತೀಯ ದರ್ಜೆ ಸಹಾಯಕರು ಲಭ್ಯ. ಇವರೆಲ್ಲಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ.

You may also like

Leave a Comment