Home » C S Shadakshari: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ – ಈ ಸಾಲಿನಿಂದ ಕೇಂದ್ರ ಮಾದರಿ ವೇತನ ವ್ಯವಸ್ಥೆ ಜಾರಿ!!

C S Shadakshari: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ – ಈ ಸಾಲಿನಿಂದ ಕೇಂದ್ರ ಮಾದರಿ ವೇತನ ವ್ಯವಸ್ಥೆ ಜಾರಿ!!

0 comments

 

C S Shadakshari : ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಒಂದು ಬಂದಿದ್ದು 2026-27 ನೇ ಸಾಲಿನಿಂದ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನ ವ್ಯವಸ್ಥೆ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವ ಸಿ ಎಸ್ ಷಡಕ್ಷರಿ ತಿಳಿಸಿದ್ದಾರೆ.

 

ಹೌದು, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 2026-27ರ ಅಂತ್ಯದೊಳಗೆ ರಾಜ್ಯ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯ ವೇತನವನ್ನು ಜಾರಿಗೆ ತರಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

 

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾತನಾಡಿದ ಅವರು, ರಾಜ್ಯದ ನೌಕರರು ನೆಮ್ಮದಿಯಿಂದ ಇರುವಂತೆ ಮಾಡುವುದು ಸಂಘದ ಕರ್ತವ್ಯವಾಗಿದೆ. ಈ ಕಾರಣದಿಂದ ನೌಕರರಿಗೆ ನೀಡುವ ಹಬ್ಬದ ಮುಂಗಡವನ್ನು ಪ್ರಸ್ತುತ ಇರುವ 25 ಸಾವಿರವನ್ನು 50 ಸಾವಿರಕ್ಕೆ ಹೆಚ್ಚಳ ಮಾಡಲು ಪ್ರಯತ್ನಿಸಲಾಗುತ್ತಿದೆ. ಎನ್‌ಪಿಎಸ್​ (NPS) ಬದಲಾಗಿ ಒಪಿಎಸ್ (OPS) ಜಾರಿಗೆ ತರುವ ಬಗ್ಗೆ ಸಂಘವು ಸತತ ಪ್ರಯತ್ನ ನಡೆಸಿದೆ ಎಂದರು.

You may also like