1
BPL Card: ರಾಜ್ಯ ಸರ್ಕಾರವು ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಸೇವೆಗೆ 24 ತಾಸಿನಲ್ಲೇ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಹೌದು, ಬಿಪಿಎಲ್ ಕಾರ್ಡುದಾರರಿಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಅದೇನೆಂದರೆ ಬಿಪಿಎಲ್ ಕುಟುಂಬಗಳಿಗೆ ಪಡಿತರ ಚೀಟಿಗಳನ್ನು 24 ಗಂಟೆಗಳೊಳಗೆ ಪಡೆಯುವ ಅವಕಾಶ ನೀಡಲು ಹೊಸ ವೆಬ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭ ಮಾಡುತ್ತಿದೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಬುಧವಾರ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವವರಿಗೆ ತುರ್ತು ವೈದ್ಯಕೀಯ ಸೇವೆಗಳು ಸುಲಭವಾಗಿ ಸಿಗುವಂತೆ ಮಾಡಲು, ರಾಜ್ಯ ಸರ್ಕಾರವು ಒಂದು ಹೊಸ ವ್ಯವಸ್ಥೆಯನ್ನು ಪರಿಚಯಿಸಲಿದೆ. ಅನಾರೋಗ್ಯಪೀಡಿತರಿಗೆ ಆದ್ಯತೆ ನೀಡುವ ಉದ್ದೇಶದಿಂದ, ಬಿಪಿಎಲ್ ಕಾರ್ಡ್ ವಿತರಣೆಗೆಂದೇ ಪ್ರತ್ಯೇಕ ಆನ್‌ಲೈನ್ ಪೋರ್ಟಲ್ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
