11
ಬೆಂಗಳೂರು: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಡಿ.31 ರಂದು ತಡರಾತ್ರಿಯವರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಬಸ್ ಸೇವೆ ನೀಡಲು ಬಿಎಂಟಿಸಿ ಕ್ರಮ ಕೈಗೊಂಡಿದೆ.
ಬ್ರಿಗೇಡ್ ರಸ್ತೆ, ಎಂಜಿ ರಸ್ತೆ, ಸರ್ವಜ್ಞ ನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ರಾತ್ರಿ 11 ಗಂಟೆಯಿಂದ ತಡರಾತ್ರಿ 2 ಗಂಟೆಯವರೆಗೆ 70 ಬಸ್‌ಗಳು ಓಡಾಡಲಿದೆ.
ಈ ಬಸ್‌ಗಳು ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ನೆಲಮಂಗಲ, ಯಲಹಂಕ, ಹೊಸಕೋಟೆ, ಬನಶಂಕರಿ, ಸಿಲ್ಕ್‌ಬೋರ್ಡ್, ಕೋರಮಂಗಲ ಸೇರಿ ಇತರ ಪ್ರದೇಶಗಳಿಗೆ ಸಂಚರಿಸಲಿದೆ.
