ವಿದ್ಯಾಸಿರಿ ಯೋಜನೆಯು ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದೂಡಲಾಗಿದೆ. ಅಂದರೆ ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಸಾಧ್ಯ ಆದ ಕಾರಣ ಮತ್ತು ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಸೌಲಭ್ಯ ಪಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಲ್ಪಸಂಖ್ಯಾತಸಮುದಾಯದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳು ಇದೀಗ ಪ್ರಸ್ತುತ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ( Vidyasiri Scholarship) ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು:
- ಎಸ್. ಎಸ್. ಎಲ್. ಸಿ. ಅಂಕಪಟ್ಪಿ
- ದೂರ ದೃಢೀಕರಣ ಪತ್ರ.
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಪುಸ್ತಕ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಿಯುಸಿ / ಸೆಮಿಸ್ಟರ್ ಅಂಕಪಟ್ಪಿ.
- ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 1
- ಶಾಲಾ ಶುಲ್ಕದ ರಶೀದಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/11/2022 ಆಗಿರುತ್ತದೆ , ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಭೇಟಿ ನೀಡಬಹುದಾಗಿದೆ.
ಮುಖ್ಯವಾಗಿ ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
