3
Karnataka Education: ರಾಜ್ಯದ ಹೆಣ್ಣು ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ. ಎಲ್ಲಾ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಶೇ.50 ರಷ್ಟು ಸೀಟು ಮೀಸಲಿಡಲ ನಿರ್ಧಾರ ಮಾಡಲಾಗಿದೆ.
ಸಿಬಿಎಸ್‌ಇ, ಐಸಿಎಸ್‌ಇ ಕೇಂದ್ರ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಈ ನಿಯಮ ಅನ್ವಯವಾಗಲಿದೆ. ನಿರೀಕ್ಷಿತ ಅರ್ಜಿಗಳು ಲಭ್ಯ ಇಲ್ಲದೇ ಹೋದಾಗ ಉಳಿದ ಸೀಟು ಬಾಲಕರಿಗೆ ನೀಡಬೇಕು. ಭಾಷಾ, ಧಾರ್ಮಿಕ ಅಲ್ಪ ಸಂಖ್ಯಾತ ಶಾಲೆ ಹೊರತು ಪಡಿಸಿ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಬಾಲಕಿಯರಿಗೆ ಮೀಸಲು ಇಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಪಾಲನೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
