Home » Liquor price: ಮದ್ಯ ಪ್ರಿಯರಿಗೆ ಗುಡ್‌ ನ್ಯೂಸ್: ಪ್ರಿಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಸರ್ಕಾರ ಚಿಂತನೆ : ಶೀಘ್ರದಲ್ಲಿಯೇ ನಿರ್ಧಾರ ಪ್ರಕಟ

Liquor price: ಮದ್ಯ ಪ್ರಿಯರಿಗೆ ಗುಡ್‌ ನ್ಯೂಸ್: ಪ್ರಿಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಸರ್ಕಾರ ಚಿಂತನೆ : ಶೀಘ್ರದಲ್ಲಿಯೇ ನಿರ್ಧಾರ ಪ್ರಕಟ

0 comments

Liquor price: ಈ ಬಾರಿ ರಾಜ್ಯದಲ್ಲಿ ಅಬಕಾರಿ ಇಲಾಖೆ ಆದಾಯ ನೀರಿಕ್ಷೆಗಿಂತ ಹೆಚ್ಚು ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಿಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ನಡೆಸಲಾಗಿದೆ. ಈ ಕುರಿತು ಚರ್ಚೆ ನಡೆಸಿ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಅಬಕಾರಿ ಸಚಿವ ಆರ್‌.ಬಿ ತಿಮ್ಮಾಪುರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೊದಲೆರಡು ತ್ರೈಮಾಸಿಕದಲ್ಲಿ ₹16,290 ಕೋಟಿ ಆದಾಯದ ನಿರೀಕ್ಷೆ ಇತ್ತು, ಆದರೆ ₹16,358 ಕೋಟಿ ಆದಾಯ ಬಂದಿದೆ” ಎಂದರು. ಇಲಾಖೆಯಲ್ಲಿ ಡಿಜಿಟಲ್‌ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ.

5 ವರ್ಷಕ್ಕೊಮ್ಮೆ ಆನ್‌ಲೈನ್ ಮೂಲಕ ಪರವಾನಗಿ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು. ಸಿಎಲ್‌ 7 ಪರವಾನಗಿ ಹಂತಗಳನ್ನು ಈಗ ಕಡಿತಗೊಳಿಸಲಾಗಿದೆ. ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗುತ್ತಿದ್ದು, ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ ಮಾಡಲಾಗಿದೆ. ಅಲ್ಲದೆ ಅಬಕಾರಿ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡದ ಹಾಗೂ ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಅಬಕಾರಿ ಇಲಾಖೆ ಮೇಲೆ ಕಣ್ಣಿರುವ ಸರ್ಕಾರ ಇದೀಗ ಎ ವೃಂದದ 31, ಬಿ ವೃಂದದ 20 ಮತ್ತು 43 ಅಬಕಾರಿ ಸಬ್‌ ಇನ್ಸ್‌ಪೆಕ್ಟರ್‌ಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ಸಚಿವರು ಹೇಳಿದರು. ಬಾಕಿ ಉಳಿಕೆ ಪರವಾನಗಿ ಕುರಿತ ಉತ್ತರಿಸಿದ ಅಬಕಾರಿ ಸಚಿವರು, ಕೆಲ ಉಳಿಕೆ ಪರವಾನಗಿಗಳು ಇವೆ. ಅವುಗಳನ್ನು ಹರಾಜು ಮಾಡುವ ಚಿಂತನೆ ನಡೆದಿದೆ ಎಂದರು. ಅಬಕಾರಿ ಆಯುಕ್ತ ವೆಂಕಟೇಶ್‌, ಹೆಚ್ಚುವರಿ ಆಯುಕ್ತರಾದ ಮಂಜುನಾಥ್‌ ಸೇರಿದಂತೆ ಹಲವರು ಹಾಜರಿದ್ದರು.

You may also like