Home » Government Holiday: ರಾಜ್ಯದಲ್ಲಿ ನಿಲ್ಲದ ಮಳೆ ಆರ್ಭಟ – ಇಂದು ರಾಜ್ಯದ ಈ ಭಾಗಕ್ಕೆ ಸರ್ಕಾರಿ ರಜೆ ಘೋಷಣೆ!!

Government Holiday: ರಾಜ್ಯದಲ್ಲಿ ನಿಲ್ಲದ ಮಳೆ ಆರ್ಭಟ – ಇಂದು ರಾಜ್ಯದ ಈ ಭಾಗಕ್ಕೆ ಸರ್ಕಾರಿ ರಜೆ ಘೋಷಣೆ!!

0 comments

Government Holiday : ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅಲ್ಲದೆ, ಅಕ್ಟೋಬರ್ 16 ಹಾಗು 17 ರಂದು ಸಹ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬೆನ್ನಲ್ಲೇ ಇಂದು ಕರ್ನಾಟಕದ ಈ ಭಾಗಕ್ಕೆ ಸರ್ಕಾರಿ ರಜೆ(Government Holiday) ಘೋಷಿಸಲಾಗಿದೆ.

ಹೌದು, ಭಾರಿ ಮಳೆಯ ಮುನ್ಸೂಚನೆಯ ನಡುವೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ನಾಳೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ನೀಡಿದ ಭಾರೀ ಮಳೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಅಂದರೆ ಅಕ್ಟೋಬರ್ 16 ರಂದು ರಜೆ ಘೋಷಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು (IMD) ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ನಾಳೆಯಿಂದ ನಗರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಸರಾ ವಿರಾಮದ ನಂತರ ಶಾಲೆಗಳು ಈಗಷ್ಟೇ ಪುನಾರಂಭಗೊಂಡಿದ್ದು, ಕೆಲವು ಶಾಲೆಗಳಲ್ಲಿ ಶಿಕ್ಷಕರಿಗೆ ಉನ್ನತ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲು ತಿಳಿಸಲಾಗಿದೆ ಎಂದು ವರದಿಯಾಗಿದೆ.

You may also like

Leave a Comment