Home » B S Yadiyurappa: ಸರಕಾರವೇ ಈ ದುರಂತಕ್ಕೆ ಕಾರಣ: ಜನರ ಆಕ್ರೋಶ ತಣ್ಣಗೆ ಮಾಡಲು ಪೊಲೀಸ್‌ ಅಧಿಕಾರಿಗಳ ತಲೆದಂಡ-ಯಡಿಯೂರಪ್ಪ

B S Yadiyurappa: ಸರಕಾರವೇ ಈ ದುರಂತಕ್ಕೆ ಕಾರಣ: ಜನರ ಆಕ್ರೋಶ ತಣ್ಣಗೆ ಮಾಡಲು ಪೊಲೀಸ್‌ ಅಧಿಕಾರಿಗಳ ತಲೆದಂಡ-ಯಡಿಯೂರಪ್ಪ

0 comments
BS Yediyurappa

B S Yadiyurappa: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ಅಧಿಕಾರಿಗಳ ತಲೆದಂಡ ನಡೆದಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರಕಾರವೇ ವ್ಯವಸ್ಥೆಯ ಜವಾಬ್ದಾರಿ ಹೊತ್ತು, ಆರ್‌.ಸಿ.ಬಿ ವಿಜಯೋತ್ಸವದ ಆಚರಣೆಗೆ ಮುಂದಾಗಿ ಇಂತಹ ಬಹುದೊಡ್ಡ ದುರಂತಕ್ಕೆ ಕಾರಣವಾಗಿರುವಾಗ ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್‌ ಆಯುಕ್ತರೂ ಸೇರಿ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿದ್ದು, ನಾಚಿಕೆಗೇಡಿನ ಕ್ರಮ ಎಂದು ಅವರು ಹೇಳಿದ್ದಾರೆ.

ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ ಭಂಡತನದಿಂದ ಸನ್ಮಾನ ಕಾರ್ಯಕ್ರಮವನ್ನು ಮುಗಿಸಿ, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಾರ್ಯಕ್ರಮ ಮುಂದುವರೆಸಿ, ಕಾಂಗ್ರೆಸ್ ಸರ್ಕಾರ ಕರುನಾಡಿನಲ್ಲಿ ಕರಾಳ ಇತಿಹಾಸ ಸೃಷ್ಟಿಸಿದೆ.

ಜನರ ಆಕ್ರೋಶವನ್ನು ತಣಿಸಲು ಹಾಗೂ ಉಚ್ಚ ನ್ಯಾಯಾಲಯದ ನ್ಯಾಯದಂಡದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಕುರ್ಚಿಗೆ ಅಂಟಿ ಕೂರುವ ಸ್ವಾರ್ಥದ ಕ್ರಮವಾಗಿದೆ. ಮುಖ್ಯಮಂತ್ರಿ
@siddaramaiah ನವರಿಗೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಗೃಹಮಂತ್ರಿ ಪರಮೇಶ್ವರ್‌ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಈ ದುರಂತ ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜೀನಾಮೆ ನೀಡಲಿ ಎಂದು ಬರೆದಿದ್ದಾರೆ.

 

You may also like