JOB: ರಾಜ್ಯದಲ್ಲಿ ಖಾಲಿ ಇರುವ 600 ಸ್ಟಾಫ್ ನರ್ಸ್ ಹುದ್ದೆಗಳನ್ನು (JOB) ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದೆ.

ಆಯುಕ್ತಾಲಯದ ದಿನಾಂಕ: 01/09/2023ರ ಪುಸ್ತಾವನೆಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹಾಗೂ 300 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಕೆಲವೊಂದು ಷರತ್ತಿಗೊಳಪಟ್ಟು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿ ನೀಡಿ ಆದೇಶಿಸಲಾಗಿದೆ.
ಇದನ್ನೂ ಓದಿ:WhaP vehicle: ಆಫ್ರಿಕಾದಲ್ಲಿ ಭಾರತದ ಮೊದಲ ಡಿಫೆನ್ಸ್ ತಯಾರಿಕಾ ಘಟಕ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಎದುರಾಗಿ 400 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ 400 ಫಾರ್ಮಸಿಸ್ಟ್ ಹುದ್ದೆಗಳನ್ನು ಕೆಲವೊಂದು ನಿಯಮದಂತೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಮಾತ್ರ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿ ಆದೇಶಿಸಲಾಗಿದೆ.
