Home » Priyank kharge: ಇಂದು ಸರ್ಕಾರದ ಇ – ಸ್ವತ್ತು ಸಾಫ್ಟ್ ವೇರ್ ಕೆಲಸ ಮಾಡಲ್ಲ, ಯಾಕೆ ಗೊತ್ತಾ ?

Priyank kharge: ಇಂದು ಸರ್ಕಾರದ ಇ – ಸ್ವತ್ತು ಸಾಫ್ಟ್ ವೇರ್ ಕೆಲಸ ಮಾಡಲ್ಲ, ಯಾಕೆ ಗೊತ್ತಾ ?

0 comments

Priyank kharge: ಇಂದು ಜು.30 ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank kharge)  ಹೇಳಿದ್ದಾರೆ. ಹೌದು, ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಹಿನ್ನೆಲೆ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ತಿಳಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು, ಸಾರ್ವಜನಿಕರ ಸಮಸ್ಯೆ ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿ ಆ.2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಅಲ್ಲದೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದ್ದು, ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಸಹಾಯ ಆಗುವಂತೆ ಸಮಗ್ರ ಆವೃತ್ತಿಯೊಂದಿಗೆ ಆರಂಭ ಮಾಡಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮ ಠಾಣಾದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಪ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

You may also like

Leave a Comment