Home » Groom missing: ಇಂದು ವಿವಾಹಬೇಕಾಗಿದ್ದ ಯುವಕ ದಿಢೀರ್ ನಾಪತ್ತೆ | ಮೆಹಂದಿ ದಿನ ಪೇಟೆಗೆ ಹಣ್ಣು ತರಲು ಹೋದವ ನಾಪತ್ತೆ

Groom missing: ಇಂದು ವಿವಾಹಬೇಕಾಗಿದ್ದ ಯುವಕ ದಿಢೀರ್ ನಾಪತ್ತೆ | ಮೆಹಂದಿ ದಿನ ಪೇಟೆಗೆ ಹಣ್ಣು ತರಲು ಹೋದವ ನಾಪತ್ತೆ

by Praveen Chennavara
0 comments
Groom missing

Groom missing: ಮಂಗಳೂರು : ಜೂನ್‌ 1ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದೆ.

ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು, ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹೆಣ್ಣು ಖರೀದಿಗೆಂದು ತೆರಳಿದ್ದ ವರನೇ (Groom missing) ನಾಪತ್ತೆಯಾಗಿದ್ದು, ವಧೂ ವರರ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ.

ತೌಡುಗೋಳಿ~ ವರ್ಕಾಡಿ ದೇವೆಂದಪಡ್ಡುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಸುಪುತ್ರ ಕಿಶನ್‌ ಶೆಟ್ಟಿ ನಾಪತ್ತೆಯಾದ ವರ ಠಾಣೆಯಲ್ಲಿ ಜೂನ್ 1ರಂದು ಕಿಶನ್ ಶೆಟ್ಟಿಗೆ ಉಪ್ಪಳ ಮೂಲದ ಪ್ರಸ್ತುತ ಜಪ್ಪಿನಮೊಗರಿನಲ್ಲಿರುವ ಕುಟುಂಬವೊಂದರ ಉಪನ್ಯಾಸಕಿಯೊಂದಿಗೆ ವಿವಾಹನಿಗದಿಯಾಗಿತ್ತು.

ವಧುವಿನ ಮನೆಯಲ್ಲಿ ಅದಾಗಲೇ ಅದ್ಧೂರಿ ಮೆಹಂದಿ ಶಾಸ್ತ್ರ ಮುಗಿದಿದ್ದು, ವರನ ಮನೆಯಲ್ಲಿ ಮಂಗಳವಾರ ನಡೆಯಬೇಕಿದ್ದ ಮೆಹಂದಿ ಶಾಸ್ತ್ರಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಮಂಗಳವಾರ ಮಧ್ಯಾಹ್ನ ಹಣ್ಣು ತರಲೆಂದು ವರ ಸ್ಕೂಟರ್ ಏರಿ ಮನೆಯಿಂದ ಹೊರಟಿದ್ದ. ಆ ಬಳಿಕ ದೇರಳಕಟ್ಟೆ ತಲುಪುತ್ತಿದ್ದಂತೆಯೇ ಪೊಲೀಸ್ ಮೂಲಗಳ ಪ್ರಕಾರ ಸುಮಾರು ಅರ್ಧ ತಾಸು ಯಾರಲ್ಲಿಯೋ ಫೋನಲ್ಲಿ ಮಾತನಾಡಿದ್ದನಂತೆ. ಆ ಬಳಿಕ ನಾಪತ್ತೆಯಾದ ವರ ಇನ್ನೂ ಮನೆಗೆ ಬಂದಿಲ್ಲ, ಕೊಣಾಜೆ ಠಾಣೆಯಲ್ಲಿ ಕಿಶನ್ ಶೆಟ್ಟಿ ಅವರ ತಂದೆ ಐತಪ್ಪ ಶೆಟ್ಟಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

 

ಇದನ್ನು ಓದಿ: Brij bhushan Sharan singh: ಕುಸ್ತಿಪಟುಗಳೇ… ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ : ಬ್ರಿಜ್ ಭೂಷಣ್ ಸವಾಲ್‌ 

You may also like

Leave a Comment